ಬೆಂಗಳೂರು: ಟವಲ್‌ನಿಂದ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಇಸ್ರೋ ನಿವೃತ್ತ ಉದ್ಯೋಗಿಯ ಬಂಧನ

ಬೆಂಗಳೂರು: ಟವಲ್‌ನಿಂದ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಇಸ್ರೋ ನಿವೃತ್ತ ಉದ್ಯೋಗಿಯ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ 65 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ಬುಧವಾರ ತಮ್ಮ ನಿವಾಸದಲ್ಲಿ ಟವಲ್‌ನಿಂದ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು, ಆರೋಪಿ ನಾಗೇಶ್ವರ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾವ್ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಪತ್ನಿಯನ್ನು ಕೊಂದ ನಂತರ ರಾವ್ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿ ಸಂಧ್ಯಾ ಶ್ರೀ ಅವರನ್ನು ಕೊಲೆ ಮಾಡಿದ ನಡೆದ ನಂತರ, ರಾವ್ ಸ್ಥಳದಲ್ಲೇ ಇದ್ದರು. ನಂತರ ಅವರ ಪರಿಚಯಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ತಂಡ, ನಿವಾಸಕ್ಕೆ ತೆರಳಿ ರಾವ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

"ಆರೋಪಿ ರಾವ್ ಖಿನ್ನತೆಗೆ ಖಿನ್ನತೆಗೆ ಒಳಗಾಗಿದ್ದರು ಮತ್ತು ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆಯ ನಂತರ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದರು ಎಂದು ಹೇಳಲಾಗಿದೆ. ಅಮೆರಿಕದಲ್ಲಿರುವ ದಂಪತಿಯ ಮಗಳಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ" ಎಂದು ಉಪ ಪೊಲೀಸ್ ಆಯುಕ್ತ(ವೈಟ್‌ಫೀಲ್ಡ್) ಸೈದುಲು ಅಡವತ್ ಅವರು ತಿಳಿಸಿದ್ದಾರೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Ads on article

Advertise in articles 1

advertising articles 2

Advertise under the article