ಬಿಕ್ಲು ಶಿವ ಕೊಲೆ ಪ್ರಕರಣ; ಮಾಜಿ ಸಚಿವ ಬೈರತಿ ಬಸವರಾಜ್ ಪೊಲೀಸ್ ವಶಕ್ಕೆ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇಂಡಿಗೋ ವಿಮಾನದಲ್ಲಿ ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ ಬಸವರಾಜ್ ಅವರನ್ನು ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಬಂಧನ ಮಾಡಲಾಗಿದೆ.
ವಿಮಾನದಲ್ಲಿ ಬರುತ್ತಿರುವ ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮೊದಲೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಬಸವರಾಜ್ ಬರುತ್ತಿದ್ದಂತೆ ಎಸಿಪಿ ಹರ್ಷ ಅವರು ವಶಕ್ಕೆ ಪಡೆದರು.
ವಿಮಾನ ನಿಲ್ದಾಣದಲ್ಲಿ ಗುರುತು ಪತ್ತೆಯಾಗದಂತೆ ಬಸವರಾಜ್ ಮುಖಕ್ಕೆ ಸಫಾರಿ ಮಾಸ್ಕ್ ಧರಿಸಿದ್ದರು.
ಸುಪ್ರೀಂನಲ್ಲಿ ವಜಾ
ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಬೈರತಿ ಬಸವರಾಜ್‌ಗೆ ಅಲ್ಲಿಯೂ ಹಿನ್ನಡೆಯಾಗಿತ್ತು.. ಬೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.
ಕೊಲೆ ಪ್ರಕರಣದಲ್ಲಿ ಸರಣಿ ಘಟನೆಗಳು ಪೂರಕವಾಗಿ ನಡೆದಿದೆ. 2 ಗುಂಪುಗಳು ಜಗಳ ಆಡುವಾಗ ಆರೋಪಿತ ಶಾಸಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆಸ್ತಿಯ ಜಿಪಿಎ ತೋರಿಸಿದ್ದಾರೆ. ಬಿಕ್ಲು ಶಿವನಿಗೆ ತಾಯಿಯ ಮುಂದೆ ಗನ್ ತೋರಿಸಲಾಗಿದೆ. ಕಾಲ್ ರೆಕಾರ್ಡ್ ಪರಿಶೀಲನೆ ನಡೆಸಿದಾಗ ಗನ್ ಹೊಂದಿರುವ ವ್ಯಕ್ತಿ ಜಗದೀಶ್ ಜೊತೆಗೆ ಸಂಪರ್ಕ ಹೊಂದಿದ್ದರು. ಬಳಿಕ ಇವರು ಶ್ರೀಲಂಕಾಕ್ಕೆ ಪಲಾಯನ ಮಾಡಿದ್ದಾರೆ. ಬೈರತಿ ಬಸವರಾಜ್ ವಿಚಾರಣೆ ಎದುರಿಸಬೇಕು. ಈ ಹಿಂದೆ ನಿರೀಕ್ಷಣಾ ಜಾಮೀನು ಪಡೆದಾಗ ಹೇಗೆ ಇರಬೇಕು ಅಂತ ಗೊತ್ತಿಲ್ವಾ ಅಂತ ಕೋರ್ಟ್ ಗರಂ ಆಗಿ ಪ್ರಶ್ನಿಸಿತ್ತು.