ಕಾರ್ಕಳಕ್ಕೆ ಬಂದಿಳಿದ ಸಿಎಂ ಸಿದ್ದರಾಮಯ್ಯ; ಹೆಲಿಪ್ಯಾಡ್ ನಲ್ಲಿ ಸಿಎಂಗೆ ಭವ್ಯ ಸ್ವಾಗತ

ಕಾರ್ಕಳಕ್ಕೆ ಬಂದಿಳಿದ ಸಿಎಂ ಸಿದ್ದರಾಮಯ್ಯ; ಹೆಲಿಪ್ಯಾಡ್ ನಲ್ಲಿ ಸಿಎಂಗೆ ಭವ್ಯ ಸ್ವಾಗತ

ಉಡುಪಿ: 'ಕಿಸಾನ್ ಸಭಾ' ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಕಳಕ್ಕೆ ಆಗಮಿಸಿದರು. 

ಹೆಲಿಕಾಪ್ಟರ್ ಮೂಲಕ ಕಾರ್ಕಳ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಅವರು ರಸ್ತೆ ಮಾರ್ಗದ ಮೂಲಕ ಕಾಬೆಟ್ಟಿಗೆ ಆಗಮಿಸಿದರು. ಅಲ್ಲಿ ನೂತನವಾಗಿ ನಿರ್ಮಿಸಿದ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ಉದ್ಘಾಟಿಸಲಿದ್ದಾರೆ. ಬಳಿಕ 'ಕಿಸಾನ್ ಸಭಾ' ಸಭಾಂಗಣದ ಉದ್ಘಾಟನೆ ನೆರವೇರಿಸಲಿದ್ದಾರೆ. ಆ ನಂತರ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವದಲ್ಲಿ ಸಿಎಂ ಭಾಗವಹಿಸಲಿದ್ದಾರೆ. 

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್‌ ಪೂಜಾರಿ, ಕಿಸಾನ್‌ ಸಭಾ ಟ್ರಸ್ಟ್‌ ಅಧ್ಯಕ್ಷ ಹರ್ಷ ಮೊಯ್ಲಿ, ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯ್‌ ಶೆಟ್ಟಿ,ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭಧ ರಾವ್‌ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article