ಉಡುಪಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಉಡುಪಿ ಜಿಲ್ಲಾ ಸಮಿತಿಯ ಕಳೆದ ಆರು ತಿಂಗಳ ಕಾರ್ಯವೈಖರಿಗಳ ಅವಲೋಕನ ಸಭೆಯು ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಸಭೆಗೆ ವೀಕ್ಷಕರಾಗಿ ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಹಾಗೂ ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ ಅವರು ಆಗಮಿಸಿ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಕಳೆದ ಆರು ತಿಂಗಳ ಪಕ್ಷದ ಚಟುವಟಿಕೆಗಳು, ಸಾಧನೆಗಳು ಹಾಗೂ ಸವಾಲುಗಳ ಕುರಿತು ವಿಶ್ಲೇಷಣೆ ನಡೆಸಿ, ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಿ ಮುಂದೆ ಬರಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರು ಜಿಲ್ಲಾ ನಾಯಕರಿಗೆ ಪಕ್ಷದ ಬೆಳವಣಿಗೆಗಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಝಾಕ್ ವೈ ಎಸ್ ಸ್ವಾಗತಿಸಿ ಮೊಹಮ್ಮದ್ ಶಫೀಕ್ ವಂದಿಸಿದರು.


