ಕಾಪು: ಇಲ್ಲಿನ ಚಂದ್ರನಗರದ ಕ್ರೆಸೆಂಟ್ ಇಂಟರ್ನ್ಯಾಷನಲ್ ವಿದ್ಯಾಸಂಸ್ಥೆ 2025-26ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ 100 ಶೇ. ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳಲ್ಲಿ ಮುಹಮ್ಮದ್ ಸ್ವಫ್ವಾನ್ 93% ಅಂಕಗಳೊಂದಿಗೆ ಶಾಲೆಗೇ ಪ್ರಥಮ ಸ್ಥಾನಿಯಾಗಿ ಮಿಂಚಿದ್ದಾರೆ.
16 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 12 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಅಭಿನಂದನೆ: ಸಂಸ್ಥೆಯ ಸ್ಥಾಪಕರು ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಂಶುದ್ದೀನ್ ಯೂಸುಫ್ ಸಾಹೇಬ್, ಶಾಲಾ ಆಡಳಿತ ಮಂಡಳಿಯ ನಿರ್ದೇಶಕರಾದ ಆಸಿಫ್ ಶಂಶುದ್ದೀನ್ ಸಾಹೇಬ್, ಆಡಳಿತ ಮಂಡಳಿಯ ಸಮಸ್ತರು, ಪ್ರಾಂಶುಪಾಲರು ,ಉಪಪ್ರಾಂಶುಪಾಲರು , ಶಿಕ್ಷಕ ಹಾಗೂ ಶಿಕ್ಷಕೇತರ ವೃಂದ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.
