ಬೆಂಗಳೂರು: 17 ವರ್ಷದ ಮಗಳನ್ನು (Daughter) ಕೊಂದು ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
40 ವರ್ಷದ ಸುವರ್ಣ ಎಂಬ ಮಹಿಳೆ ತನ್ನ 17 ವರ್ಷದ ಮಗಳು ಕಾರುಣ್ಯಳನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಬೆಂಗಳೂರಿನ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
