ಕಾರ್ಕಳ: ನಿಟ್ಟೆ ಸಮೀಪ ಬಾವಿಗೆ ಬಿದ್ದ ಚಿರತೆಯನ್ನು ರಕ್ಷಣೆ ಮಾಡಿದ ಅರಣ್ಯ ಇಲಾಖೆ

ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಬೋರ್ಗಲ್ಲುಗುಡ್ಡೆ ಎಂಬಲ್ಲಿ ಬಾವಿಗೆ ಬಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದೆ.

ಚಿರತೆಯು ಆಹಾರ ಅರಸಿ ಸ್ಥಳೀಯ ಮನೆಗೆ ಬಂದಿದೆ.ಈ ವೇಳೆ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಬಾವಿಯಲ್ಲಿ ಚಿರತೆಯನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ರುತ್ರನ್ ಮತ್ತು  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶ್ರೀಧರ್   ಮಾರ್ಗದರ್ಶನದಂತೆ ಚಂದ್ರಕಾಂತ್ ಕರುಣಾಕರ್ ,  ಗಸ್ತು ಅರಣ್ಯಪಾಲಕ ಸುರೇಶ್  ಮತ್ತು ಸ್ಥಳೀಯರ ಸಹಕಾರದೊಂದಿಗೆ ಬಾವಿಗೆ ಬಿದ್ದ ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು.