ಬೀದರ ಜಿಲ್ಲೆಯ ಚಿಟ್ಟಾ ಅರಣ್ಯ ವ್ಯಾಪ್ತಿಯಲ್ಲಿ ಸಂಭವಿಸಿದ ಕಾಡ್ಗಿಚ್ಚು ಗಮನಕ್ಕೆ ಬಂದ ತಕ್ಷಣ, ತಾನು ಪ್ರಯಾಣಿಸುತ್ತಿದ್ದ ಗಾಡಿಯನ್ನು ನಿಲ್ಲಿಸಿ ಸ್ಥಳಕ್ಕೇ ತೆರಳಿ ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಬೆಂಕಿ ನಂದಿಸುವ ಕಾರ್ಯದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರು ಭಾಗವಹಿಸಿದ ಘಟನೆ ವರದಿ ಆಗಿದೆ.
ಅರಣ್ಯ ನಮ್ಮ ಅಮೂಲ್ಯ ಸಂಪತ್ತು. ಕಾಡ್ಗಿಚ್ಚುಗಳಿಂದ ಜೀವ ವೈವಿಧ್ಯತೆ ಮತ್ತು ಪರಿಸರಕ್ಕೆ ಉಂಟಾಗುವ ಹಾನಿಯನ್ನು ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಬಲಪಡಿಸುವಂತೆ ಸಚಿವ ಈಶ್ವರ್ ಖಂಡ್ರೆಯವರು ಸೂಚಿಸಿದರು.

