ರವಿವಾರ ಸಚಿವ ಈಶ್ವರ್ ಖಂಡ್ರೆ ಮಂಗಳೂರಿಗೆ: ಎ.ಕೆ.ಅನ್ಸಾಫ್

ಮಂಗಳೂರು: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಮೇ 17ರ ರವಿವಾರ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.

ರವಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಮತ್ತು ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ಆಯೋಜಿಸಿರುವ 'ಕರ್ನಾಟಕ ಗೇರು ಮೇಳ ಹಾಗೂ ಕಾರ್ಯಾಗಾರ 2026' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3ಗಂಟೆಯಿಂದ ಸಂಜೆ 5ಗಂಟೆಯ ವರಗೆ ಮಂಗಳೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲೆಯ ಅರಣ್ಯ ಮತ್ತು ಪರಿಸರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪರಾಮರ್ಶನಾ ಸಭೆ ನಡೆಸಲಿದ್ದಾರೆ ಎಂದು ಖಂಡ್ರೆಯವರ ಆಪ್ತರು, ಕರಾವಳಿ ಕಡಲ ತೀರ ವಲಯ ನಿರ್ವಹಣಾ ಸಮಿತಿ ಸದಸ್ಯ ಎ.ಕೆ.ಅನ್ಸಾಫ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.