ಮಂಗಳೂರು: ಭಾರತರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸೋಷಿಯಲ್ ಡೆವಲಪ್‌ಮೆಂಟ್ ಫೌಂಡೇಶನ್ (ರಿ) ವತಿಯಿಂದ ಕರ್ನಾಟಕ ಸರ್ಕಾರದ ಮಾಜಿ ವಿಧಾನ ಪರಿಷತ್ ಸದಸ್ಯರು, ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಕೆ.ಎಸ್.ಮೊಹಮ್ಮದ್ ಮಸೂದ್ ಅವರ 90ನೇ ಜನ್ಮದಿನದ ಅಂಗವಾಗಿ, ಮಂಗಳೂರಿನ ಕುದ್ರೋಳಿಯಲ್ಲಿರುವ ಅವರ ನಿವಾಸದಲ್ಲಿ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.
ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸೋಷಿಯಲ್ ಡೆವಲಪ್‌ಮೆಂಟ್ ಫೌಂಡೇಶನ್‌ನ ಅಧ್ಯಕ್ಷರಾದ ಅಬ್ದುಲ್ ಮಜೀದ್ ಸಿತಾರ್ ಮತ್ತು ಪದಾಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಸುದೀರ್ಘ ಸಾರ್ವಜನಿಕ ಸೇವೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಫೌಂಡೇಶನ್ ವತಿಯಿಂದ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ಮತ್ತು ಪುಷ್ಪಗುಚ್ಛವನ್ನು ನೀಡಿ, ಅವರ ಮುಂದಿನ ಆಯುಷ್ಯ, ಆರೋಗ್ಯಕ್ಕಾಗಿ ಹಾರೈಸಿ ಭವ್ಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಫೌಂಡೇಶನ್‌ನ ಪ್ರಮುಖರು, ಪ್ರಧಾನ ಸಲಹೆಗಾರರೂ, ಸಂಪನ್ಮೂಲ ವ್ಯಕ್ತಿಯೂ ಆದ ರಫೀಕ್ ಮಾಸ್ಟರ್, ಸ್ಥಳೀಯ ನಿಕಟ ಪೂರ್ವ ಕಾರ್ಪೊರೇಟರ್ ಸಂಶುದ್ದಿನ್, ಎಚ್.ಬಿ.ಟಿ, ಫೌಂಡೇಶನ್ ನ ಸಲಹೆಗಾರರು ಬದ್ರಿಯಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಬಿ. ರಹಮತ್ ಅಲಿ, ಫೌಂಡೇಶನ್ ನ ಉಪಾಧ್ಯಕ್ಷರುಗಳಾದ ಅಬ್ದುಲ್ ಖಾದರ್ ಹುಸೇನ್ ಪಡುಬಿದ್ರಿ, ಅಬೂಬಕ್ಕರ್ ಮತ್ತು ಮಹಮ್ಮದ್ ಮಫಾಸ್ ಸೀತಾರ್ ಉಪಸ್ಥಿತರಿದ್ದರು. ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.





