ಉಡುಪಿ: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಮೇ 25ರ ಸೋಮವಾರ ಉಡುಪಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸೋಮವಾರ ಬೆಳಗ್ಗೆ 10.30 ಗಂಟೆಗೆ ಕಾರ್ಕಳ ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಕಛೇರಿ ಉದ್ಘಾಟನೆ ಮಾಡಲಿದ್ದು, ಜೊತೆಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಕುದುರೆಮುಖ ವನ್ಯಜೀವಿ ಉಪವಿಭಾಗ, ಕಾರ್ಕಳ ಕಛೇರಿ ಉದ್ಘಾಟನೆ ಮಾಡಲಿದ್ದಾರೆ.
ಬಳಿಕ 12.30 ಗಂಟೆಗೆ ಉಡುಪಿಯಲ್ಲಿ ಮಂಗಳೂರು ಮತ್ತು ಉಡುಪಿ'ಜಿಲ್ಲೆಯ ಅರಣ್ಯ ಮತ್ತು ಪರಿಸರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪರಾಮರ್ಶನಾ ಸಭೆ ನಡೆಸಲಿದ್ದಾರೆ. ಸಂಜೆ 4.30 ಗಂಟೆಗೆ ಬ್ರಹ್ಮಾವರ ನೀಲಾವರದಲ್ಲಿ ಸ್ಮೃತಿವನ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಖಂಡ್ರೆಯವರ ಆಪ್ತರು, ಕರಾವಳಿ ಕಡಲ ತೀರ ವಲಯ ನಿರ್ವಹಣಾ ಸಮಿತಿ ಸದಸ್ಯ ಎ.ಕೆ.ಅನ್ಸಾಫ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
