ಕಾಪು: ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಜೆಯ ವೇಳೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಪ್ರಯಾಣಿಸುತ್ತಿದ್ದ ಕಾರು ಸಹಿತ ಮೂರು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಅವರಿದ್ದ ಕಾರು ಹಾಗೂ ಇತರ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಇದರಿಂದ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ಇನ್ನೊಂದು ಕಾರಿನಲ್ಲಿ ರೋಗಿಯೊಬ್ಬರು ಸಂಚರಿಸುತ್ತಿದ್ದು ಅವರಿಗೂ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಗಫೂರ್ ಅವರು ಆಂಬ್ಯುಲೆನ್ಸ್ ಮೂಲಕ ಉಡುಪಿಯ ಹೈಟೆಕ್ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಸಣ್ಣಪುಟ್ಟ ಗಾಯಗೊಂಡಿರುವ ಗಫೂರ್ ಅವರು ಅದನ್ನೆಲ್ಲ ಲೆಕ್ಕಿಸದೆ ರೋಗಿಯೊಬ್ಬರನ್ನು ಆಸ್ಪತ್ರೆಗೆ ಖುದ್ದಾಗಿ ಕರೆದೊಯ್ದು ಚಿಕಿತ್ಸೆ ನೀಡಿರುವುದು ಅವರ ಮಾನವೀಯ ಕಳಕಳಿಗೆ ಸಾಕ್ಷಿಯಾಗಿದೆ.




