ಬಸವಣ್ಣನವರ ಮಾನವೀಯ ಮೌಲ್ಯಗಳ ಸಂದೇಶ ಇಂದಿಗೂ ಸಮಾಜಕ್ಕೆ ದಾರಿದೀಪ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ತಮಿಳುನಾಡಿನ ಸೇಲಂನಲ್ಲಿ ತಮಿಳುನಾಡು ವೀರಶೈವ ಕೌನ್ಸಿಲ್ ಹಾಗೂ ಚೀಫ್ ಜಂಗಮ್ ಸೋಶಿಯಲ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಈಶ್ವರ್ ಬಿ ಖಂಡ್ರೆ ಉದ್ಘಾಟಿಸಿದರು. 

ಬಳಿಕ ಮಾತನಾಡಿದ ಅವರು, ಜಗಜ್ಯೋತಿ ಬಸವಣ್ಣನವರ ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸಂಕಲ್ಪದೊಂದಿಗೆ ಸಮಾಜದ ಒಳಿತಿಗಾಗಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು.