ದೆಹಲಿ: ರಾಜ್ಯಸಭೆಯ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಸಭೆಯ ನೂತನ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಕರ್ನಾಟಕ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಆತ್ಮೀಯವಾಗಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಖರ್ಗೆ ಅವರ ದೀರ್ಘ ರಾಜಕೀಯ ಅನುಭವ, ಸಂವಿಧಾನದ ಮೌಲ್ಯಗಳ ಮೇಲಿನ ಅಚಲ ಬದ್ಧತೆ ಹಾಗೂ ಜನಪರ ನಾಯಕತ್ವ ದೇಶದ ಪ್ರಜಾಪ್ರಭುತ್ವವನ್ನು ಇನ್ನಷ್ಟು ಸದೃಢಗೊಳಿಸಲಿ ಎಂದು ಸಚಿವ ಈಶ್ವರ ಖಂಡ್ರೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ರಹೀಮ್ ಖಾನ್ ಉಪಸ್ಥಿತರಿದ್ದರು.
