ಮಂಗಳೂರು: ಬಿ.ಸಿ.ರೋಡ್ KSRTC ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಕಕ್ಕೆಪದವು ನಿವಾಸಿ ಲಾವಣ್ಯ (21) ಹತ್ಯೆಯಾದ ಮೃತ ಯುವತಿ ಎಂದು ತಿಳಿದು ಬಂದಿದೆ.
ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಯುವಕನೋರ್ವ ಮಾರಕಾಸ್ತ್ರದಿಂದ ಹತ್ಯೆ ಮಾಡಿ ಪರಾರಿಯಾಗುತ್ತಿರುವ ದೃಶ್ಯವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
