ಕಾರವಾರ: ಯಲ್ಲಾಪುರ ಮೂಲದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಭಟ್ಕಳ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಅಭಿನಂದನ್ ಗೌಡ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
16 ವರ್ಷದ ಬಾಲಕಿಯನ್ನ ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್ಜ್‌ನಲ್ಲಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಬಾಲಕಿ ದೂರಿನ ಮೇಲೆ ಪಿಎಸ್‌ಐನನ್ನು ಅರೆಸ್ಟ್ ಮಾಡಲಾಗಿದೆ.
ಬಂಧಿತ ಪಿಎಸ್‌ಐ ಅಭಿನಂದನ್ ಗೌಡ ರಾಮನಗರ ಜಿಲ್ಲೆಯ ಕನಕಪುರ ಮೂಲದವನು. ಕೆಲವು ತಿಂಗಳ ಹಿಂದೆಯಷ್ಟೇ ಮಂಕಿ ಠಾಣೆಗೆ ವರ್ಗಾವಣೆಗೊಂಡಿದ್ದ ಎನ್ನಲಾಗಿದೆ.
ಆರೋಪಿಯನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
