ಬ್ರಹ್ಮಗಿರಿ ಸರ್ಕಲ್‌ನಲ್ಲಿ ಮತ್ತೆ ‘ಕಣ್ಣು ಮುಚ್ಚಾಲೆ ಆಟ’: ಬಾಯ್ತೆರೆದ ಗುಂಡಿಗಳು – ಅಪಘಾತದ ಭೀತಿ

ಉಡುಪಿ: ಕೆಲವು ದಿನಗಳ ಹಿಂದೆ ಬ್ರಹ್ಮಗಿರಿ ಸರ್ಕಲ್‌ನಲ್ಲಿದ್ದ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ವಾಹನ ಸಂಚಾರ ಸುಗಮವಾಗಿ ಸಾಗುತ್ತಿತ್ತು. ಆದರೆ ಇದೀಗ ಅದೇ ಗುಂಡಿಗಳು ಮತ್ತೆ ಬಾಯ್ತೆರೆದಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಆತಂಕ ಉಂಟುಮಾಡಿವೆ. ವಿಶೇಷವಾಗಿ ತಿರುವಿನಲ್ಲೇ ಇರುವ ಈ ಗುಂಡಿಗಳು ದ್ವಿಚಕ್ರ ವಾಹನ ಸವಾರರಿಗೆ ಅತ್ಯಂತ ಅಪಾಯಕಾರಿ ಆಗಿದ್ದು, ಯಾವುದೇ ಕ್ಷಣದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಇದೆ.

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಈ ರಸ್ತೆ ಗುಂಡಿಗಳನ್ನು ದುರಸ್ತಿಗೊಳಿಸಿ, ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಬೇಕೆಂದು ಸ್ಥಳೀಯ ಸಮಾಜ ಸೇವಕರಾದ ಎಂ. ಇಕ್ಬಾಲ್ ಮನ್ನಾ ಅವರು ಆಗ್ರಹಿಸಿದ್ದಾರೆ.