ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದು, ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ವಹಿಸಲಾಗಿದೆ.
ಪ್ರಧಾನ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ. ಶಿಕ್ಷಣ ಸಚಿವಾಲಯದ ಜವಾಬ್ದಾರಿಯೊಂದಿಗೆ ತಮ್ಮ ಅಸ್ತಿತ್ವದಲ್ಲಿರುವ ಖಾತೆಯನ್ನು ಕೇಂದ್ರ ಸಚಿವ ಜೋಶಿ ಅವರು ಮುಂದುವರಿಸಲಿದ್ದಾರೆ.
ಸದ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಹೊಂದಿರುವ ಜೋಶಿಗೆ ಹೆಚ್ಚುವರಿಯಾಗಿ ಶಿಕ್ಷಣ ಖಾತೆಯನ್ನು ನೀಡಲಾಗಿದೆ. ಪ್ರಧಾನಿಗಳ ಶಿಫಾರಸಿನ ಮೇರೆಗೆ ಸಚಿವ ಪ್ರಲ್ಹಾದ್ ಜೋಷಿಯವರಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದು, ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿಯನ್ನು ದೃಢಪಡಿಸಿದೆ.
