ಉಡುಪಿ: ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಸಖೇಂದ್ರ ಸುವರ್ಣ ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ, ಕಾಪು ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಮೊತ್ತೇಸರರಾಗಿ ಸೇವೆ ಸಲ್ಲಿಸಿದ್ದರು. ಕಾಪುವಿನ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು.
ಉದ್ಯಾವರದ ರೇಷ್ಮಾ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕರಾಗಿದ್ದ ಅವರು, ವೈನ್ ಮರ್ಚಂಟ್ ಅಸೋಸಿಯೇಷನ್‌ನ ಪದಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು.
