ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಇಒಗಳು ಹಾಗೂ ಪಿಡಿಒಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲೇ ವಾಸ್ತವ್ಯ ಇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು (EOs) ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDOs) ತಮ್ಮ ನಿಯೋಜಿತ ಕೇಂದ್ರ ಸ್ಥಾನದಲ್ಲೇ ಕಡ್ಡಾಯವಾಗಿ ವಾಸ್ತವ್ಯವಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೇಂದ್ರ ಸ್ಥಾನದಲ್ಲಿ ವಾಸ್ತವ್ಯವಿರದ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಂತಹ ಅಧಿಕಾರಿಗಳೇ ಇದಕ್ಕೆ ನೇರ ಹೊಣೆಗಾರರಾಗಿರುತ್ತಾರೆ ಎಂದಿದ್ದಾರೆ.
