ಉಡುಪಿ: ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಾನ್ ಬಾಸ್ಕೋ–ಶಿರ್ವ ಮಸೀದಿ ಸಮೀಪ, ಶಿರ್ವದಿಂದ ಉಡುಪಿ ಕಡೆಗೆ ಸಾಗುವ ಮುಖ್ಯ ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತವಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ.
ರಸ್ತೆಯಲ್ಲಿದ್ದ ಗುಂಡಿಯಿಂದ ವಾಹನ ಸವಾರರಿಗೆ ಅಪಾಯ ಉಂಟಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಯುವಕರು ಸ್ವಂತ ಖರ್ಚಿನಲ್ಲಿ ಅಗತ್ಯ ಸಾಮಗ್ರಿಗಳನ್ನು ಬಳಸಿ ಗುಂಡಿಯನ್ನು ಮುಚ್ಚಿದರು.
ಈ ಕಾರ್ಯದಿಂದ ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಿದ್ದು, ಸಾರ್ವಜನಿಕರು ಯುವಕರ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದ್ದಾರೆ. ಸ್ಥಳೀಯರ ಈ ಸ್ವಯಂಸೇವಾ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

