ಝಮೀರ್ ಅಹ್ಮದ್ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಮನವಿ; ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ವಿರುದ್ಧದ IMA ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.

ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ರಾಜ್ಯಪಾಲರು ಈ ಸಂಬಂಧಿ ಕಡತವನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಸಂಪುಟ ವಿಸ್ತರಣೆಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನಿರಾಕರಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಝಮೀರ್  ಅಹ್ಮದ್ ಖಾನ್ ವಿರುದ್ಧ ಲೋಕಾಯುಕ್ತ ಕಾನೂನು ಹೋರಾಟಕ್ಕೆ ಹಿನ್ನಡೆಯಾದಂತಾಗಿದೆ.