ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಹಾಗೂ ವಿ ದ ಲೀಡರ್ಸ್ ಸಂಸ್ಥೆಯ ಸ್ಥಾಪಕ ಕೆ. ಅಣ್ಣಾಮಲೈ ಅವರು ಬುಧವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಮಠದ ಆಡಳಿತ ಮಂಡಳಿ ವತಿಯಿಂದ ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶ್ರೀಕೃಷ್ಣ ದೇವರ ಪೋಟೊವನ್ನು ನೀಡಿ ಗೌರವಿಸಲಾಯಿತು. ಬಳಿಕ ದೇವರ ಪ್ರಸಾದವನ್ನು ನೀಡಲಾಯಿತು.
