ಜೈಲಿನಲ್ಲಿದ್ದ ಕೈದಿಗಳೊಂದಿಗೆ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ!

ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ಬಗ್ಗೆ ಮಹಿಳಾ ಪೊಲೀಸ್ ಅಧಿಕಾರಿ ದೂರು ನೀಡಿದ್ದಾರೆ.

ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್​​​​ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಡಿಯೋದಲ್ಲಿರುವ ಮಹಿಳಾ ಪೊಲೀಸ್ ಅಧಿಕಾರಿ ದೂರು ದಾಖಲಿಸಿದ್ದಾರೆ. ವಿಡಿಯೋ ವೈರಲ್ ಮಾಡಿದ ಇಬ್ಬರ ವಿರುದ್ಧ ಮಹಿಳಾಧಿಕಾರಿ, ಬೆಂಗಳೂರಿನ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರೌಡಿಶೀಟರ್​ ಸಾಯಿಕುಮಾರ್ ಈ ವಿಡಿಯೋ ವೈರಲ್ ಮಾಡಿದ್ದಾನೆ ಎಂದು ಅಧಿಕಾರಿ ಆರೋಪಿಸಿದ್ದು, ಕೆಲ ವರ್ಷಗಳ ಹಿಂದೆ ರೌಡಿಶೀಟರ್​ ಧರ್ಮ ಜೊತೆ ಆತ್ಮೀಯವಾಗಿದ್ದೆ. ವಿಡಿಯೋ ಕಾಲ್​ನಲ್ಲಿ ಧರ್ಮ ಜೊತೆ ಮಾತಾಡಿದ್ದಾಗ ಆತನೇ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ವಿಡಿಯೋವನ್ನು ರೌಡಿಶೀಟರ್ ಸಾಯಿಕುಮಾರ್​​ಗೆ ಕೊಟ್ಟು ವೈರಲ್‌ ಮಾಡಿಸಿದ್ದಾನೆ. ಹೀಗಾಗಿ ಇವರಿಬ್ಬರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಸಿದ್ದಾರೆ.

ನಾನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಉಸ್ತುವಾರಿ ಅಧಿಕಾರಿಯಾಗಿದ್ದೇನೆ. ನನಗೆ ಮದುವೆಯಾಗಿ ಮಕ್ಕಳಿದ್ದಾರೆ, ಸಮಾಜದಲ್ಲಿ ಒಳ್ಳೆಯ ಹೆಸರಿದೆ. ವಿಡಿಯೋ ವೈರಲ್ ಮಾಡಿ ನನ್ನ ಮಾರ್ಯದೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ರೌಡಿಶೀಟರ್​ಗಳಾದ​​ ಧರ್ಮ, ಸಾಯಿಕುಮಾರ್ ಹಾಗೂ ಇತರರ ವಿರುದ್ಧ ಕ್ರಮಕೈಗೊಳ್ಳುವಂತೆ ಅಧಿಕಾರಿ ದೂರು ನೀಡಿದ್ದಾರೆ.

ಮಹಿಳಾ ಅಧಿಕಾರಿ ನೀಡಿರುವ ಈ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಪೊಲೀಸರು ಎನ್​​ಸಿಆರ್ ದಾಖಲಿಸಿಕೊಂಡಿದ್ದಾರೆ.​