ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ; ಸಚಿವ ರಿಜ್ವಾನ್ ಅರ್ಷದ್, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂ.ಎ ಗಫೂರ್ ಭಾಗಿ

ಕಾಪು: ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ವತಿಯಿಂದ ಶನಿವಾರ ಕಾಪು ಪ್ರಜಾಸೌಧ ಸಭಾಂಗಣದಲ್ಲಿ ಆಯೋಜಿಸಲಾದ "ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ"ಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 75 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ,  ನಿವೇಶನ, ಹಕ್ಕುಪತ್ರ, ಸಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು. 




ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ ಗಫೂರ್, ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿಕ್ರಮ್, ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ, ಅಪರ ಜಿಲ್ಲಾಧಿಕಾರಿಗಳಾದ ಅಬಿದ್ ಗಡ್ಯಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾಪು ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.