ಉಚ್ಚಿಲ ದಸರಾ; ಶ್ರೀಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ


ಶಾರದಾ ಮಾತೆಗೆ ಪೂಜೆ, ಮಾಧವ ಮಂಗಲ ಪೂಜ್ಯರ ಪ್ರತಿಮೆಗೆ ಪುಷ್ಪಾರ್ಚನೆ

ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದಸರಾ ಉತ್ಸವದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು. 

ಬಳಿಕ ಶಾರದಾ ಮಾತೆಯ ಪ್ರತಿಮೆಗೆ ಪೂಜೆ ಸಲ್ಲಿಸಿ, ಮೊಗವೀರ ಸಮಾಜದ ಕುಲಗುರು ಕೀರ್ತಿಶೇಷ ಮಾಧವ ಮಂಗಲ ಪೂಜ್ಯರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.




ದೇವಸ್ಥಾನದ ವಸ್ತುಪ್ರದರ್ಶನ ಆವರಣದಲ್ಲಿ ವಿವಿಧ ಧಾನ್ಯಗಳಿಂದ ರಚಿಸಲಾದ ತಮ್ಮದೇ ಕಲಾಕೃತಿಯನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಮಂಕಾಳ ಎಸ್. ವೈದ್ಯ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಮಾಜಿ ಶಾಸಕರಾದ ಲಾಲಾಜಿ ಮೆಂಡನ್, ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.