ಉಚ್ಚಿಲದಲ್ಲಿ ಕೆಆರ್‌ಎಸ್ ಪಕ್ಷದ ಕಾಪು ತಾಲೂಕು ನೂತನ ಕಚೇರಿ ಶುಭಾರಂಭ
ಉಚ್ಚಿಲ: ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾಪು ತಾಲೂಕು ನೂತನ ಘಟಕ ಹಾಗು ಕಚೇರಿಯು ಇತ್ತೀಚಿಗೆ ಉಚ್ಚಿಲ ಗ್ರಾಮದಲ್ಲಿ ಉದ್ಘಾಟನೆಗೊಂಡಿತು.
ಕಾಪು ತಾಲೂಕು ನೂತನ ಅಧ್ಯಕ್ಷರಾಗಿ ಮೊಹಮ್ಮದ್ ನಝೀಮ್, ಉಪಾಧ್ಯಕ್ಷರಾಗಿ ಮೊಹಮ್ಮದ್ ಸಾದಿಕ್ ಹಾಗು ಅಬ್ದುಲ್ ರೆಹಮಾನ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಮನೋಜ್ ಅವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷವು ಕರ್ನಾಟಕದ ಒಂದು ಪ್ರಾದೇಶಿಕ ರಾಜಕೀಯ ಪಕ್ಷವಾಗಿದ್ದು, ಪ್ರಾಮಾಣಿಕ, ಜನಪರ ರಾಜಕಾರಣ ಮತ್ತು ಭ್ರಷ್ಟಾಚಾರ-ಮುಕ್ತ ಕರ್ನಾಟಕವನ್ನು ನಿರ್ಮಿಸುವುದು ಪಕ್ಷದ ಗುರಿಯಾಗಿದೆ.
ಈ ಶುಭ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ರಾಜೇಶ್ ಕೆ.ವಿ., ಪ್ರಧಾನ ಕಾರ್ಯದರ್ಶಿ ಶೋಭಾ, ಉಪಾಧ್ಯಕ್ಷ ಸಂತೋಷ್ ಹಾಗೂ ಕಾರ್ಯದರ್ಶಿ ಪ್ರಸಾದ್ ಪೂಜಾರಿ ಉಪಸ್ಥಿತರಿದ್ದರು. ಕಾಪು ತಾಲೂಕು ಘಟಕದ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
