ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡೋದಷ್ಟೇ ಅಲ್ಲ, ಈ ಸರ್ಕಾರ ಶೀಘ್ರವೇ ಬೀಳಲಿದೆ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋ ತುಣುಕನ್ನು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆ ನಡೆಸಲು ಮುಂದಾಗಿರುವ ಸಂದರ್ಭದಲ್ಲೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ದೇಶಾದ್ಯಂತ ನಡೆಯುತ್ತಿರುವ SIR ಪ್ರಕ್ರಿಯೆಯನ್ನು ವಿರೋಧಿಸಿ ಈ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕಾಂಗ್ರೆಸ್ ಈ ಆಂದೋಲನಕ್ಕೆ ಬೆಂಬಲ ನೀಡುತ್ತಿಲ್ಲ ಎಂಬ ಟೀಕೆಗಳೂ ಕೇಳಿಬಂದಿವೆ.
ದೆಹಲಿ ಪೊಲೀಸ್ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗಿದೆ. ಈ ವೇಳೆ ರಾಹುಲ್ ಗಾಂಧಿಯವರ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಉಂಟುಮಾಡಿದೆ.
