ಉಳ್ಳಾಲ: ಆರೋಗ್ಯ ಸಚಿವ ಡಾ. ಯು.ಟಿ. ಖಾದರ್ ಅವರ ಜನ್ಮದಿನದ ಪ್ರಯುಕ್ತ ಸೌಹಾರ್ದ ಸೇವಾ ಸಮಿತಿ ಉಳ್ಳಾಲ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಸೋಮವಾರ ಉಳ್ಳಾಲದ ಹಜ್ರತ್ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ಉಚಿತ ಹಿಜಾಮಾ ಚಿಕಿತ್ಸೆ, ಕಣ್ಣಿನ ತಪಾಸಣೆ ಹಾಗೂ ಜನರಲ್ ಆರೋಗ್ಯ ತಪಾಸಣೆ ಸೇವೆಗಳನ್ನು ಒದಗಿಸಲಾಯಿತು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಲು ದುಬೈನಿಂದ ಆಗಮಿಸಿದ್ದ KCF UAE ರಾಷ್ಟ್ರೀಯ ಸನ್ನದ್ ಸಮಿತಿಯ ಅಧ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ ಅವರನ್ನು ಸೌಹಾರ್ದ ಸೇವಾ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಝೈನುದ್ದೀನ್ ಹಾಜಿ ಬೆಳ್ಳಾರೆ ಅವರು, ಡಾ. ಯು.ಟಿ. ಖಾದರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದರು. ಸಮಾಜದ ಆರೋಗ್ಯ ಮತ್ತು ಜನರ ಕಲ್ಯಾಣದ ದೃಷ್ಟಿಯಿಂದ ಸೌಹಾರ್ದ ಸೇವಾ ಸಮಿತಿ ನಡೆಸುತ್ತಿರುವ ಸೇವಾ ಕಾರ್ಯಗಳನ್ನು ಮೆಚ್ಚಿ, ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಶುಭ ಹಾರೈಸಿದರು.
