ಬೆಂಗಳೂರು: ಬೆಂಗಳೂರಿನ ವಕೀಲ ಮಂಜುನಾಥ್ ಶೂಟೌಟ್ (Bengaluru Lawyer Shootout Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಮಿತ್ ಕುಮಾರ್ ದುಬೆಯನ್ನು ವೈಟ್ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 19ರಂದು ವಕೀಲ ಮಂಜುನಾಥ್ ಅವರನ್ನು ಗುಂಡಿಕ್ಕಿ ಹತ್ಯೆಗೈದು ಆರೋಪಿಗಳು ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗಾಗಿ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ತಮಿಳುನಾಡು, ತೆಲಂಗಾಣ, ಬಿಹಾರ ಹಾಗೂ ದೆಹಲಿಯಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು.
ಇದೀಗ ಘಟನೆ ನಡೆದು ಸುಮಾರು ಒಂದು ತಿಂಗಳ ಬಳಿಕ ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಅಮಿತ್ ಕುಮಾರ್ ದುಬೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪವನ್ ಕುಮಾರ್ ದುಬೆಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ.
