ಉಡುಪಿ: ಉಪ್ಪಿನಕೋಟೆಯ ಜಾಮಿಯಾ ಮಸೀದಿಯ ಮಾಜಿ ಅಧ್ಯಕ್ಷ ಶೇಖ್ ಜಮಾಲ್ ಹೈದರ್ ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಯುನಿಟಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದ ಅವರು, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಬಡವರ ಪರ ಸದಾ ಕಾಳಜಿ ಹೊಂದಿದ್ದ ಅವರು, ಸಮಾಜದ ದುರ್ಬಲ ವರ್ಗದ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಾ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಸಮಾಜಮುಖಿ ಚಿಂತನೆ, ಸರಳ ವ್ಯಕ್ತಿತ್ವ ಹಾಗೂ ಸೇವಾ ಮನೋಭಾವದ ಮೂಲಕ ಗುರುತಿಸಿಕೊಂಡಿದ್ದ ಅವರ ನಿಧನಕ್ಕೆ ವಿವಿಧ ಗಣ್ಯರು, ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಹಿತೈಷಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
